Cnewstv.in / 16.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಒಂದು ವರ್ಷ ಪೂರೈಸಿದ ಭಾರತದ ಕೋವಿಡ್ ಲಸಿಕಾ ಅಭಿಯಾನ
ನವದೆಹಲಿ : ಕೋವಿಡ್ ಲಸಿಕಾ ಅಭಿಯಾನ ಆರಂಭಿಸಿ ಭಾರತದಲ್ಲಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾಯವರು ಆರೋಗ್ಯ ಕಾರ್ಯಕರ್ತರಿಗೆ ವಿಜ್ಞಾನಿಗಳಿಗೆ ಹಾಗೂ ದೇಶದ ಜನರಿಗೆ ಶುಭಾಶಯವನ್ನು ತಿಳಿಸಿದ್ದಾರೆ.
ಇಂದು ತಮ್ಮ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಇದು ವಿಶ್ವದ ಅತ್ಯಂತ ಯಶಸ್ವಿ ಅಭಿಯಾನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಹಾಗೂ ಸಹಕರಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೂ ದೇಶದ ಜನತೆಗೆ ವಿಜ್ಞಾನಿಗಳಿಗೆ ಶುಭಾಶಯಗಳನ್ನು ಕೋರಿದರು.
16 ನೇ ಜನವರಿ 2021 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕಾ ಅಭಿಯಾನ ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಇಂದಿಗೆ ಒಂದು ವರ್ಷವನ್ನು ಪೂರೈಸಿದ್ದು, ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಅಭಿಯಾನ ಆರಂಭವಾದ ಇಲ್ಲಿಯವರೆಗೂ ಒಟ್ಟು 1,56,76,15,454 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಇದನ್ನು ಒದಿ : https://cnewstv.in/?p=7631
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv