Breaking News

ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್,

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್,

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಅನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ.

ಕುವೆಂಪು ವಿಶ್ವವಿದ್ಯಾನಿಲಯದ 24 ಜನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕುವೆಂಪು ವಿಶ್ವವಿದ್ಯಾನಿಲಯದ 5 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪಕುಲಸಚಿವರು ನಾಳೆಯಿಂದ ಜನವರಿ 21 ರವರೆಗೆ ಎಲ್ಲಾ ಸ್ನಾತಕೋತ್ತರ ತರಗತಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಿಬ್ಬಂದಿಗಳಿಗೆ ಹಾಗು ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ಸ್ಯಾನಿಟೈಸ್ ಮಾಡಲಾಗಿದೆ ಹಾಗೂ ಎಲ್ಲ ತರಗತಿಗಳನ್ನು ಆನ್ಲೈನ್ ಮೂಲಕ ನಡೆಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನು ಒದಿ : https://cnewstv.in/?p=7646

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*