Breaking News

ಪಂಜಾಬ್ ವಿಧಾನ ಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮುಂದೂಡಿಕೆ

Cnewstv.in / 17.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಪಂಜಾಬ್ ಚುನಾವಣೆಯ ಫೆಬ್ರವರಿ 20ಕ್ಕೆ ಮುಂದೂಡಿಕೆ.

ನವದೆಹಲಿ : ಚುನಾವಣಾ ಆಯೋಗವು ಪಂಜಾಬ್ ನಲ್ಲಿ ಫೆಬ್ರವರಿ 14 ರಂದು ಒಂದನೇ ಹಂತದ ವಿಧಾನಸಭೆ ಚುನಾವಣೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಫೆಬ್ರವರಿ 14 ರಂದು ನಡೆಯಬೇಕಿದ್ದ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದೆ.

ಫೆಬ್ರವರಿ 16 ರಂದು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣೆಯನ್ನು ಮುಂದೂಡುವಂತೆ ಹಲವು ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು.

ಫೆಬ್ರವರಿ 14 ರಂದು ಗುರು ರವಿದಾಸ್ ಅವರ ಹಲವಾರು ಅನುಯಾಯಿಗಳು ಉತ್ತರ ಪ್ರದೇಶಕ್ಕೆ ಪ್ರಯಾಣಿಸಲಿರುವ ಕಾರಣ ಅವರು ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುವುದಿಲ್ಲ ಎಂದು ಪಕ್ಷಗಳು ಹೇಳಿದ್ದವು.

ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿದ ಚುನಾವಣಾ ಆಯೋಗ ಫೆಬ್ರವರಿ 14 ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ಫೆಬ್ರವರಿ 20 ರಂದು ನಡೆಯಲಿದೆ ಎಂದು ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಒದಿ : https://cnewstv.in/?p=7660

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*