Cnewstv.in / 17.01.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಂಡ್ಯ : ಕೋವಿಡ್ ನಿಯಮವನ್ನು ಉಲ್ಲಂಘಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದ 15ಜನ ಅಯ್ಯಪ್ಪ ಮಾಲಾಧಾರಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ 15ಜನ ಅಯ್ಯಪ್ಪ ಮಾಲಾಧಾರಿಗಳು
ಶಬರಿಮಲೆ ಯಾತ್ರೆಗೆ ಹೊರಟಿದ್ದರು ಯಾತ್ರೆಗೂ ಮೊದಲು ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. 15 ಜನರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಎಲ್ಲಾರಿಗೂ ಹೋಂ ಐಸೋಲೇಷನ್ ನಲ್ಲಿ ಇರುವಂತೆ ಅಧಿಕಾರಿಗಳು ಆದೇಶ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಆರೋಗ್ಯ ಅಧಿಕಾರಿಗಳ ಕಣ್ಣುತಪ್ಪಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದರು.
ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಹಾಗೂ ಆರೋಗ್ಯ ಅಧಿಕಾರಿಗಳು ಯಾತ್ರಿಗಳನ್ನು ಗುಂಡ್ಲುಪೇಟೆಯ ಸಮೀಪ ತಡೆದು ವಾಪಸ್ ಕರೆಸಿದ್ದಾರೆ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ ಇವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ನಂತರ ಇವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಿದ್ದಾರೆ.
ಇದನ್ನು ಒದಿ : https://cnewstv.in/?p=7672
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv