Breaking News

Covid -19 vaccination : 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಲಸಿಕೆ.

Cnewstv.in / 18.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Covid -19 vaccination : 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಲಸಿಕೆ.

ಹೊಸದಿಲ್ಲಿ : 15ರಿಂದ 18 ವರ್ಷದೊಳಗಿನವರ ಕೋವಿಡ್‌ ಲಸಿಕೆ ಅಭಿಯಾನ ಫೆಬ್ರವರಿ ಅಂತ್ಯಕ್ಕೆ ಮುಗಿಯುವ ನಿರೀಕ್ಷೆ ಇದ್ದು, ಲಸಿಕೆ ಅಭಿಯಾನವನ್ನು ಇನ್ನಷ್ಟು ವಿಸ್ತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, 12-14 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್‌ ಮೊದಲ ವಾರದಿಂದ ಲಸಿಕೆ ಹಾಕುವ ಸಾಧ್ಯತೆ ಇದೆ.

ಫೆಬ್ರವರಿ ಅಂತ್ಯದ ಹೊತ್ತಿಗೆ 15-17 ವರ್ಷದ ವಯೋಮಾನದವರ ಲಸಿಕೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ. ಈ ಬಳಿಕ 12-14 ವರ್ಷದ ಮಕ್ಕಳಿಗೆ ಲಸಿಕೆ ಪ್ರಕ್ರಿಯೆ ಆರಂಭವಾಗಬಹುದು ಎಂದು ಕೋವಿಡ್‌ ಕಾರ್ಯಕಾರಿ ಗುಂಪಿನ ಮುಖ್ಯಸ್ಥ ಡಾ| ಎನ್‌.ಕೆ. ಅರೋರಾ ಹೇಳಿದ್ದಾರೆ. ಈ ವಯೋಮಾನದ 7.5 ಕೋಟಿ ಮಕ್ಕಳು ಇದ್ದಾರೆ ಎಂದು ಅಂದಾಜಿಸಲಾಗಿದೆ.

ಸದ್ಯ ಝೈಕೋವ್‌-ಡಿ ಲಸಿಕೆಯನ್ನು (ZyCoV-D vaccine) 12 ವರ್ಷ ಮೇಲ್ಪಟ್ಟಎಲ್ಲಾ ಮಕ್ಕಳಿಗೂ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮತ್ತೊಂದೆಡೆ ಕೋವ್ಯಾಕ್ಸಿನ್‌ 2 ವರ್ಷ ಮೇಲ್ಪಟ್ಟಎಲ್ಲಾ ವಯೋಮಾನದ ಮಕ್ಕಳಿಗೂ ನೀಡಬಹುದಾದ ಲಸಿಕೆ ಅಭಿವೃದ್ಧಿಪಡಿಸಿದೆ. ಅದಕ್ಕೆ ಶೀಘ್ರವೇ ಅನುಮೋದನೆ ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳಿಗೂ ಲಸಿಕೆ ಅಭಿಯಾನ ಆರಂಭಿಸಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

ಇದನ್ನು ಒದಿ : https://cnewstv.in/?p=7676

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*