Breaking News

ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಗೊತ್ತಾ ??

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಗೊತ್ತಾ ??

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆಗಳನ್ನು ನೀಡಿದರು.

ನಂತರ ಮಾಹಿತಿ ನೀಡಿದ, ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇದುವರೆಗೆ ಪ್ರಾಥಮಿಕ ಶಾಲಾ ಹಂತದ 115 ವಿದ್ಯಾರ್ಥಿಗಳಿಗೆ ಹಾಗೂ 26 ಶಿಕ್ಷಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಇದೇ ರೀತಿ ಕಾಲೇಜು ಹಂತದ 35 ವಿದ್ಯಾರ್ಥಿಗಳು ಹಾಗೂ 6 ಶಿಕ್ಷಕರು ಪಾಸಿಟಿವ್ ಆಗಿದ್ದು, 5 ಶಾಲೆಗಳನ್ನು ಹಾಗೂ 4ಕಾಲೇಜುಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕವಾಗಿ ಸೀಲ್‍ಡೌನ್ ಮಾಡಲಾಗಿದೆ.

ಪ್ರತಿದಿನ ಶಾಲಾ ಕಾಲೇಜು ಆರಂಭಕ್ಕೆ ಮೊದಲು ಕಡ್ಡಾಯವಾಗಿ ವಿದ್ಯಾರ್ಥಿಗಳ ಟೆಂಪರೇಚರ್ ತಪಾಸಣೆ ನಡೆಸಬೇಕು. ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಬೇಕು. ಅಂತಹ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯಗೊಳಿಸಬಾರದು.

ಇದೇ ರೀತಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರಂತರ ನಿಗಾ ಇರಿಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ 5ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿ ನಿಲಯಗಳನ್ನು ತಾತ್ಕಾಲಿಕವಾಗಿ ಸೀಲ್‍ಡೌನ್ ಮಾಡಿ, ಅಲ್ಲಿರುವ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸದೆ ಅಲ್ಲಿಯೇ ನೋಡಿಕೊಳ್ಳಬೇಕು.

ಪ್ರತಿ ಶಾಲಾ ಕಾಲೇಜುಗಳಲ್ಲಿ ಕೋವಿಡ್ ಮೇಲೆ ನಿಗಾ ಇರಿಸಲು ಈ ಕುರಿತು ವರದಿಯನ್ನು ಸಲ್ಲಿಸಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಇದುವರೆಗೆ ಜಿಲ್ಲೆಯಲ್ಲಿ ಕಂಡು ಬಂದಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಪೈಕಿ ಶೇ.99ರಷ್ಟು ಮಂದಿಯಲ್ಲಿ ರೋಗ ಲಕ್ಷಣ ಇಲ್ಲದಿದ್ದರೂ, ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ಹೇಳಿದರು.

ಇದನ್ನು ಒದಿ : https://cnewstv.in/?p=7680

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*