Breaking News

ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ ??

Cnewstv.in / 18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ.

ಬೆಂಗಳೂರು : ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡಿದ್ದೀರೋ ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ನಾಯಕತ್ವದ ಮೇಲಾಟ ಇದು. ಕಾಂಗ್ರೆಸ್‌ ಒಳಜಗಳದಿಂದಾಗಿ ಮೇಕೆದಾಟು ಯೋಜನೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿರುವಾಗ ಇಂತಹ ಪ್ರಹಸನ ಮಾಡುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು.

ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದರು ಸಹ ನೀವು ಪಾದಯಾತ್ರೆಯನ್ನು ಮಾಡಿ ಏನು ಸಾಧಿಸಿದ್ದೀರಿ ?? ಕೊರೊನಾ ಪ್ರಕರಣಗಳು ಹೆಚ್ಚಳವಾಗಿದ್ದೇ ಸಾಧನೆ. ಪಾದಯಾತ್ರೆಯನ್ನು ಉದ್ಘಾಟನೆ ಮಾಡಿದ ಮಲ್ಲಿಕಾರ್ಜುನಖರ್ಗೆ, ಸಿಎಂ ಇಬ್ರಾಹಿಂ ಸೇರಿದಂತೆ ಅನೇಕ ನಾಯಕರು ಸೋಂಕಿಗೆ ತುತ್ತಾಗಿದ್ದಾರೆ.

ಯಾವುದೇ ಪಾದಯಾತ್ರೆ ಅಥವಾ ಹೋರಾಟದಿಂದ ನೀರಾವರಿ ಯೋಜನೆಗಳನ್ನು ಪಡೆಯಲು ಸಾಧ್ಯವಿಲ್ಲ. ನಿಮ್ಮ ಏರ್ ಕಂಡೀಶನ್ ಪಾದಯಾತ್ರೆ ಮತ್ತೆ ಮುಂದುವರೆಸಬೇಡಿ ಎಂದು ಟಾಂಗ್ ನೀಡಿದರು.

ಇದನ್ನು ಒದಿ : https://cnewstv.in/?p=7689

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*