Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನಾಳೆಯಿಂದ ಮೂರು ದಿನ ನಗರದ ಶಾಲೆಗಳು ಬಂದ್
ಶಿವಮೊಗ್ಗ : ನಾಳೆಯಿಂದ ಮೂರು ದಿನಗಳ ಕಾಲ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ಸಹ ಹೆಚ್ಚಾಗುತ್ತಿದೆ.
ಜಿಲ್ಲೆಯಲ್ಲಿ ಶಿಕ್ಷಕರಿಗೆ ಹಾಗೂ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸುಮಾರು 45 ಶಾಲೆಯ 208 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಗರದ ಎಲ್ಲಾ ಶಾಲೆಗಳ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ನಾಳೆಯಿಂದ ಶುಕ್ರವಾರದವರೆಗೆ ರಜೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇರಲಿದೆ ಹಾಗಾಗಿ ಮುಂದಿನ ಸೋಮವಾರದಿಂದ ತರಗತಿಗಳು ಪುನರಾರಂಭವಾಗಲಿದೆ ಎಂದರು.
ಇದನ್ನು ಒದಿ : https://cnewstv.in/?p=7692
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv