Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ.
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಶಿವಮೊಗ್ಗ ಸ್ಮಾಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಇಂದು ಬೆಳಿಗ್ಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಪ್ರದೇಶಗಳಾದ ಖಾಸಗಿ ಬಸ್ ನಿಲ್ದಾಣ, ಪಾರ್ಕ್ ಮುಂಭಾಗ, ಸುವರ್ಣ ಸಂಸ್ಕೃತಿಕ ಭವನ, ಅಲ್ಕೊಳ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಕೆಲಸಗಳು ಆರಂಭದಲ್ಲಿ ಕೊರೊನಾ ಕಾರಣದಿಂದಾಗಿ ಮಂದಗತಿಯಲ್ಲಿ ಸಾಗುತ್ತಿದ್ದು ಆದರೆ ಇದೀಗ ಕೆಲಸಗಳು ಉತ್ತಮ ಮಟ್ಟದಲ್ಲಿ ತ್ವರಿತವಾಗಿ ನಡೆಯುತ್ತಿದೆ. ಈ ಯೋಜನೆ ಅಡಿ ಈಗಾಗಲೇ 28 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಇದಕ್ಕಾಗಿ 473 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಶೇ. 60ರಷ್ಟು ಪ್ರಗತಿಯನ್ನು ಸಾಧಿಸಿದೆ ಎಂದರು.
ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಕಮಿಷನರ್ ಚಿದಾನಂದ ವಟಾರೆ, ಆಡಳಿತ ಪಕ್ಷದ ನಾಯಕರಾದ ಎಸ್ಎಸ್ ಚನ್ನಬಸಪ್ಪ, ಸೇರಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=7696
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv