Breaking News

ಶಿವಮೊಗ್ಗ- ಭದ್ರಾವತಿ : ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ.

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ.

ಶಿವಮೊಗ್ಗ :  ಶಿವಮೊಗ್ಗ- ಭದ್ರಾವತಿ ನಡುವೆ ಬರು ಎಲ್‍ಸಿ ನಂ.34ರಲ್ಲಿ ರೈಲ್ವೇ ಓವರ್‍ಬ್ರಿಡ್ಜ್ ಕಾಮಗಾರಿ ನಡೆಯುತ್ತಿರುವುದರಿಂದ ಸುಗಮ ಸಂಚಾರದ ದೃಷ್ಠಿಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಚಾಲಕರು/ಪ್ರಯಾಣಿಕರು ತಾತ್ಕಾಲಿಕ ಅವಧಿಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸೂಚಿಸಲಾಗಿರುವ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.

ಪರ್ಯಾಯ ಮಾರ್ಗಗಳು :

ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ಬಿಳಿಕಿ ಕ್ರಾಸ್-ಕೃಷ್ಣಪ್ಪ ವೃತ್ತದ ಮುಖಾಂತರ ಭದ್ರಾವತಿ ತಲುವುದು.

ಭದ್ರಾವತಿಯಿಂದ ಶಿವಮೊಗ್ಗ ಕಡೆಗೆ ಸಂಚರಿಸುವ ವಾಹನಗಳು ಅಂಡರ್‍ಬ್ರಿಡ್ಜ್- ಉಂಬ್ಳೇಬೈಲ್ ರಸ್ತೆ ಕೃಷ್ಣಪ್ಪ ವೃತ್ತ- ರಾಷ್ಟ್ರೀಯ ಹೆದ್ದಾರಿ-69ರ ಮುಖಾಂತರ ಶಿವಮೊಗ್ಗಕ್ಕೆ ಸಂಚರಿಸಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=7703

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*