Cnewstv.in /18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮರಕ್ಕೆ ಡಿಕ್ಕಿ ಹೊಡೆದು,ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು
ಶಿವಮೊಗ್ಗ : ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸ್ಕೋಡಾ ಕಂಪನಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಕ್ರೆಬೈಲ್ ಸಮೀಪ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ತಕ್ಷಣವೇ ಕಾರಿಗೆ ಬೆಂಕಿ ಹತ್ತಿಕೊಂಡು ಧಗ ಧಗನೇ ಉರಿಯಲಾರಂಭಿಸಿದೆ.
ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು,ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಅವರಿಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾವುದೇ ಪ್ರಾಣಾಪಾಯವಾಗಿಲ್ಲ. ಅದರೆ ಕಾರ್ ಮಾತ್ರ ನಡುರಸ್ತೆಯಲ್ಲೇ ಸುಟ್ಟು ಕರಕಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಇದನ್ನು ಒದಿ : https://cnewstv.in/?p=7709
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv