Cnewstv.in /18.01.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ.
ಮೈಸೂರು : ತೆಂಗಿನಕಾಯಿಯಲ್ಲಿ ಬಸವ ರೂಪಿ ಕಾಣಿಸಿಕೊಂಡಿದ್ದು ದರ್ಶನಕ್ಕಾಗಿ ಜನ ಸಾಲುಗಟ್ಟಿ ನಿಂತ ಘಟನೆ ಮೈಸೂರಿನಲ್ಲಿ ನಡೆದಿದೆ.
ಸುಲಿದ ತೆಂಗಿನಕಾಯಿ ಮೊಳಕೆ ಒಡೆದು ಬಸವನ ಮೂರ್ತಿಯ ರೂಪದಲ್ಲಿ ಹೊರಬಂದಿದೆ. ಅದು ಬಸವನ ರೀತಿಯ ಮುಖ ಹಾಗೂ ಕೊಂಬುಗಳ ರೂಪ ಪಡೆದುಕೊಂಡಿದೆ. ಅದನ್ನು ಜನ ಬಸವ ದೇವರ ಸ್ವರೂಪಿ ಎಂದು ಪೂಜೆ ಮಾಡುತ್ತಿದ್ದಾರೆ.
ಈ ವಿಶೇಷ ತೆಂಗಿನಕಾಯಿಯನ್ನು ಮೈಸೂರಿನ ಹಿನಕಲ್ ಬಡಾವಣೆಯ ದೇವಸ್ಥಾನದಲ್ಲಿ, ಶಿವ ಲಿಂಗದ ಮುಂದಿಟ್ಟು, ಹೂ, ಅರಿಶಿನ – ಕುಂಕುಮ ಹಚ್ಚಿ ಭಕ್ತಿಯಿಂದ ಜನ ಪೂಜಿಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=7711
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv