Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯು ಏ.16ರಿಂದ ಮೇ 4ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಇ-ಮೇಲ್ ವಿಳಾಸ jdexam.dpue@gmail.com ಮೂಲಕ ಕಳುಹಿಸಬಹುದಾಗಿದೆ.
ಅದೇ ರೀತಿಯಲ್ಲಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಾ.14ರಿಂದ 25ರ ವರೆಗೆ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆಗಳನ್ನು ನಡೆಸಲು ಸೂಚಿಸಲಾಗಿದೆ. ಫೆ.17ರಿಂದ ಮಾ.25ರ ವರೆಗೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಪರೀಕ್ಷಾ ದಿನಾಂಕ ವಿಷಯ :
ಏ.16 ಗಣಿತ, ಶಿಕ್ಷಣ, ಮೂಲ ವಿಜ್ಞಾನ (ಬೇಸಿಕ್ ಮ್ಯಾಥ್ಸ್)
ಏ.17 ಭಾನುವಾರ ರಜೆ
ಏ.18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏ.19 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್ಸ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್
ಏ.20 ಇತಿಹಾಸ, ಭೌತಶಾಸ್ತ್ರ
ಏ.21 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ಏ.22 ತರ್ಕಶಾಸ್ತ್ರ, ಬಿಸಿನೆಸ್ ಸ್ಟಡೀಸ್
ಏ.23 ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
ಏ.24 ಭಾನುವಾರ ರಜೆ
ಏ.25 ಅರ್ಥಶಾಸ್ತ್ರ
ಏ.26 ಹಿಂದಿ
ಏ.28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಏ.29 ಕನ್ನಡ
ಏ.30 ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 1 ಭಾನುವಾರ ರಜೆ
ಮೇ 2 ಭೂಗೋಳಶಾಸ್ತ್ರ, ಜೀವಶಾಸ್ತ್ರ,
ಮೇ 3 ರಂಜಾನ್ ರಜೆ
ಮೇ 4 ಇಂಗ್ಲಿಷ್
ಇದನ್ನು ಒದಿ : https://cnewstv.in/?p=7713
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments