cnewstv.in /19.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.82 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 8,961ಕ್ಕೆ ಏರಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,82,970 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 441 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಪಾಸಿಟಿವಿಟಿ ದರ ಶೇ. 15.13 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 8,961ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.
1,88,157 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 18,31,000 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,79,01,241 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,87,202 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,55,83,039 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 15.70 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.
ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.
ಇದನ್ನು ಓದಿ : https://cnewstv.in/?p=7716
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments