Cnewstv.in / 19.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಹುಶಾರ್!!!
ಬೆಂಗಳೂರು: ಕೋವಿಡ್-19 ಕುರಿತು ತಪ್ಪು ಮಾಹಿತಿ ಹರಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ವೈದ್ಯರಿಗೆ ಎಚ್ಚರಿಕೆ ನೀಡಿದೆ.
ಕೆಲವು ವೃತ್ತಿಪರ ವೈದ್ಯರು COVID-19 ಕುರಿತು ಅಪೂರ್ಣ, ತಪ್ಪಾದ ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂತಹ ತಪ್ಪು ಮಾಹಿತಿಯು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಸನ್ನಿವೇಶದಲ್ಲಿ ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗುತ್ತದೆ. ಆರೋಗ್ಯ ಮತ್ತು ಕಂದಾಯ ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಪಾಲಿಸದಿರಲು ಜನರನ್ನು ಪ್ರೋತ್ಸಾಹಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಕೊರೋನಾಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಸಂವಹನ ನಡೆಸುವಾಗ ವೈದ್ಯಕೀಯ ವೃತ್ತಿಪರರು ಹೆಚ್ಚಿನ ಕಾಳಜಿ ಮತ್ತು ಎಚ್ಚರಿಕೆಯನ್ನು ವಹಿಸಬೇಕು. ಯಾವುದೇ ಮಾಧ್ಯಮ ಅಥವಾ ಸಾಮಾಜಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೊದಲು ಸರ್ಕಾರದ ಮಾರ್ಗಸೂಚಿಗಳನ್ನು, ಸುತ್ತೋಲೆಗಳು ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಉಲ್ಲೇಖಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
“ಮಾಧ್ಯಮ ಅಥವಾ ಸಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ COVID-19 ಕುರಿತು ಯಾವುದೇ ತಪ್ಪು ಮಾಹಿತಿ ಅಥವಾ ವಾಸ್ತವಿಕವಲ್ಲದ ಡೇಟಾವನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ, 2005 ರ ಸೆಕ್ಷನ್ 54 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆಯ ಸೆಕ್ಷನ್ 4 (ಕೆ) ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಇದನ್ನು ಒದಿ : https://cnewstv.in/?p=7734
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments