Breaking News

ಇನ್ನೊಂದು ವರ್ಷದಲ್ಲಿ ಪ್ರತಿ ಮನೆಗಳಿಗೆ ನಿರಂತರ ಕುಡಿಯುವ ನೀರು : ಕೆ.ಎಸ್.ಈಶ್ವರಪ್ಪ

Cnewstv.in /19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇನ್ನೊಂದು ವರ್ಷದಲ್ಲಿ ಪ್ರತಿ ಮನೆಗಳಿಗೆ ನಿರಂತರ ಕುಡಿಯುವ ನೀರು : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ನಗರದ ಹೊರವಲಯಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಯೋಜನೆ ಮತ್ತು ನಗರದ 24*7 ಕುಡಿಯುವ ನೀರು ಯೋಜನೆಗಳಿಂದಾಗಿ ಮುಂದಿನ ವರ್ಷದೊಳಗೆ ಈ ಪ್ರದೇಶಗಳಲ್ಲಿ ಪ್ರತಿ ಮನೆ ಮನೆಗೆ ನಿರಂತರವಾಗಿ ಕುಡಿಯುವ ನೀರು ಸಿಗಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮತ್ತು ಮಹಾನಗರಪಾಲಿಕೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಪಾಲಿಕೆ ವ್ಯಾಪ್ತಿಯ ಹೊರವಲಯದಲ್ಲಿ ಬರುವ ಪ್ರದೇಶಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಸರಬರಾಜು ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವ ರೂ. 96.50 ಕೋಟಿ ಅಂದಾಜು ವೆಚ್ಚದ ಯೋಜನೆ ಕಾಮಗಾರಿಗೆ ಗುಡ್ಡೇಕಲ್ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಗಾರದ ಹತ್ತಿರ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಪ್ರಸ್ತುತ ನಗರದ ಹೊರವಲಯದ ಪ್ರದೇಶಗಳಿಗೆ ಕುಡಿಯುವ ನೀರು ಕಲ್ಪಿಸಲು ರೂ.96.50 ದೊಡ್ಡ ಮೊತ್ತದ ಕಾಮಗಾರಿಯನ್ನು ಶಿವಮೊಗ್ಗಕ್ಕೆ ನೀಡಿರುವ ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಅಧ್ಯಕ್ಷರಾದ ರಾಜುಗೌಡರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ.

ಇನ್ನು ಬರುವ ಮಾರ್ಚ್ ಒಳಗೆ ನಗರದಲ್ಲಿ ಪ್ರಗತಿಯಲ್ಲಿರುವ 24*7 ಕುಡಿಯುವ ನೀರು ಸರಬರಾಜು ಯೋಜನೆ ಕೂಡ ಪೂರ್ಣಗೊಳ್ಳಲಿದೆ. ಇನ್ನು ಒಂದು ವರ್ಷದಲ್ಲಿ ಈ ಕಾಮಗಾರಿಯನ್ನೂ ಸಹ ಮುಗಿಸಬೇಕು. ಇದಕ್ಕಾಗಿ ಕಂಟ್ರಾಕ್ಟರ್‍ಗಳಿಗೆ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಇನ್ನೊಂದು ವರ್ಷದಲ್ಲಿ ಎರಡೂ ಕಾಮಗಾರಿಗಳು ಪೂರ್ಣಗೊಂಡು ನಗರದ ಎಲ್ಲ ಮನೆಗಳಿಗೆ ಕುಡಿಯುವ ನೀರು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಒದಿ : https://cnewstv.in/?p=7739

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*