Cnewstv.in / 19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿಂದ ವ್ಯಾಪಾರ-ವಹಿವಾಟಿಗೆ ಕಷ್ಟವಾಗುತ್ತಿದೆ ಎಂದು ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬುದರ ಬಗ್ಗೆ ಸರ್ಕಾರ ಇನ್ನೆರಡು ದಿನಗಳಲ್ಲಿ ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ವರದಿ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಿದೆ ಇದರ ಮಧ್ಯದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಡುವೆ ವಾಕ್ ಸಮರ ನಡೆಯುತ್ತಿದೆ.
ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಪ್ರಚಾರ ರ್‍ಯಾಲಿ ನಡೆಯುತ್ತದೆ ತಾನೇ? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು.
ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ ಜೀವನ, ಜೀವ ಎರಡು ಮುಖ್ಯ.ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಾ ವರ್ಗದ ಜನರಿಗೂ ಕರ್ಫ್ಯೂ, ಲಾಕ್ ಡೌನ್ ನಿಂದ ತೊಂದರೆ ಆಗಿದೆ.
-ಸಂಸದ ಪ್ರತಾಪ್ ಸಿಂಹ.
ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,
ನಮ್ಮ ಸರ್ಕಾರದ ಮೊದಲ ಆದ್ಯತೆ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರ ಜೀವವನ್ನು ಉಳಿಸುವುದು, ಜನರ ಜೀವನಕ್ಕೆ ಕುಂದುಕೊರತೆಗಳು ಆಗದಂತೆ ನೋಡಿಕೊಳ್ಳುವುದು. ಪ್ರತಿಯೊಬ್ಬರಿಗೂ ಅವರದ್ದೆ ಆದ ಅಭಿಪ್ರಾಯ ಇರುತ್ತದೆ.ಮುಖ್ಯಮಂತ್ರಿಗಳು ರಾಜ್ಯದ ಜನರ ಆರೋಗ್ಯದ ಹಿತ ಕಾಯಲು ನಿರ್ಣಯ ತೆಗೆದುಕೊಳ್ಳುತ್ತಾರೆ. ನಾನು ಯಾರ ಹೇಳಿಕೆಗೂ ಕೂಡ ಪ್ರತಿಕ್ರಿಯೆ ಕೊಡುವುದಿಲ್ಲ. ಜನರ ಆರೋಗ್ಯ ನನಗೆ ತುಂಬಾ ಮುಖ್ಯ, ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ
– ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಇದನ್ನು ಒದಿ : https://cnewstv.in/?p=7746
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv