Cnewstv.in / 20.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ.
ಶಿವಮೊಗ್ಗ : ಇಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆ ನಡೆಸಲಾಯಿತು. ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಮೂರನೇ ಅಲೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಅಂಕಿಅಂಶಗಳನ್ನು ಗಮನಿಸಿದಾಗ, ಎರಡು ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪ್ರಭಾವ ಬೀರಿದ್ದು ಬಹುತೇಕ ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಎರಡು ಲಸಿಕೆ ಹಾಕದ 17ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಕೋವಿಡ್ ರೋಗ ಲಕ್ಷಣಗಳು ಹೆಚ್ಚಾಗಿವೆ. ಈಗಾಗಲೇ ಜಿಲ್ಲೆಯಲ್ಲಿ ಶೇ.99 ಮಂದಿ ಪ್ರಥಮ ಡೋಸ್ ಹಾಗೂ ಶೇ.84ರಷ್ಟು ಮಂದಿ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಿದೆ ಎಂಬುವುದು ಇದರಿಂದ ಸ್ಪಷ್ಟ ಎಂದರು.
ಒಂದೆರಡು ದಿನಗಳಲ್ಲಿ ಅಗತ್ಯವಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಟೆಲಿಫೋನ್ ಮೂಲಕ ಟ್ರಯಾಜ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಹ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.
ಇದನ್ನು ಒದಿ : https://cnewstv.in/?p=7789
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv