Breaking News

ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ.

Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ.

ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕು ಅಥವಾ ಕೊರೊನಾ ನಿಯಮಗಳನ್ನು ಇನ್ನಷ್ಟು ಕಡಿತಗೊಳಿಸಬೇಕು ಎಂಬುದರ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಈಗಾಗಲೇ ಚಾಲ್ತಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಜನರು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ.‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ತಜ್ಞರ ಸಭೆಯನ್ನು ನಡೆಸಲಾಗುವುದು.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ ಕರ್ಫ್ಯೂ ಹಿಂಪಡೆದುಕೊಳ್ಳಬೇಕಾ ? ಶಾಲೆಗಳ ಪುನರಾರಂಭಿಸಬೇಕಾ?? ಎಂಬ ವಿಚಾರಗಳನ್ನು ಕುರಿತು ಚರ್ಚಿಸಲಾಗುವುದು ಹಾಗೂ ಸಭೆಯಲ್ಲಿ ತಜ್ಞರ ಅಭಿಪ್ರಾಯವನ್ನು ಹಾಗೂ ಕೇಂದ್ರ ನಾಯಕರ ಸಲಹೆಯನ್ನು ಪಡೆಯಲಿದ್ದಾರೆ. ನಂತರ ಅದರ ಆಧಾರದ ಮೇಲೆ ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿಗಳನ್ನು ನಿರ್ಧರಿಸಲಿದ್ದಾರೆ.

ಒಟ್ಟಿನಲ್ಲಿ ಇಂದು ಮಧ್ಯಾಹ್ನದ ಒಳಗಾಗಿ ರಾಜ್ಯದಲ್ಲಿ ಕೊರೊನಾ ನಿಯಮಗಳ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನು ಒದಿ : https://cnewstv.in/?p=7797

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*