Breaking News

ಕೋವಿಡ್ ನಿಯಾಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಎನ್.ಎಸ್.ಯು.ಐ.

Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕೋವಿಡ್ ನಿಯಾಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಎನ್.ಎಸ್.ಯು.ಐ.

ಶಿವಮೊಗ್ಗ : ಗ್ರಾಮಾಂತರ ಶಾಸಕ ಕೆ.ಬಿ‌. ಅಶೋಕ್ ನಾಯ್ಕ್ ಅವರು ಸರ್ಕಾರದ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವುದನ್ನ ಶಿವಮೊಗ್ಗ ಜಿಲ್ಲೆ NSUI ವತಿಯಿಂದ ಖಂಡಿಸಲಾಯಿತು.

ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಆದರೂ ಸಹ ಶಾಸಕ ಕೆ ಬಿ ಅಶೋಕ್ ನಾಯ್ಕ್ ಅವರ ಒಡೆತನದ ಅಕ್ಷರ ಶಿಕ್ಷಣ ಸಂಸ್ಥೆಯಲ್ಲಿ ಶಾಸಕರ ಹುಟ್ಟು ಹಬ್ಬವನ್ನು “ಫೌಂಡರ್ಸ್ ಡೇ” ಎಂಬ ಹೆಸರಿನಲ್ಲಿ ಅಚರಿಸಿಕೊಂಡಿದ್ದಾರೆ. ಇದಕ್ಕಾಗಿ ಮಕ್ಕಳನ್ನು ಶಾಲೆಗೆ ಕರೆಸಿಕೊಂಡು ಕುಣಿದು ಕುಪ್ಪಳಿಸಿದ್ದಾರೆ.

ತಮ್ಮ ಹುಟ್ಟುಹಬ್ಬಕ್ಕಾಗಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ, ನೂರಾರೂ ಮಂದಿಯನ್ನು ಒಟ್ಟಿಗೆ ಸೇರಿಸಿ ಕೊರೊನಾ ಹರಡುವ ನೇರವಾಗಿ ಕಾರಣವಾಗಿದ್ದಾರೆ. ತಮ್ಮ ಹುಟ್ಟುಹಬ್ಬ ಆಚರಣೆಗಾಗಿ ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಅವರನ್ನು ದುರ್ಬಳಕೆ ಮಾಡಿಕೊಂಡಿರುವ ಗ್ರಾಮಾಂತರ ಶಾಸಕ ಕೆಬಿ ಅಶೋಕ್ ನಾಯಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲು ಆದೇಶಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ವಿನಂತಿಸಿದರು.

ಇದನ್ನು ಒದಿ : https://cnewstv.in/?p=7799

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*