Breaking News

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು.

Cnewstv.in / 21.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು.

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ರಾಜ್ಯದಲ್ಲಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯಸರ್ಕಾರ ರದ್ದುಮಾಡಿದೆ.

ರಾಜ್ಯದಲ್ಲಿ ವಿಧಿಸಿರುವ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿತ್ತು. ಅಲ್ಲದೆ ತಜ್ಞರು ಕೂಡ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದ್ದು, ಪಾಸಿಟಿವಿಟಿ ದರ ಹೆಚ್ಚು ಇರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಸಭೆಯಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಅರಗ ಜ್ಞಾನೆಂದ್ರ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾಕ್ಟರ್ ಸುದರ್ಶನ್ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ತಜ್ಞರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನು ಒದಿ : https://cnewstv.in/?p=7801

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*