Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ.
ಬೆಂಗಳೂರು : ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು ಸಭೆಯ ನಂತರ ಬೆಂಗಳೂರಿನಲ್ಲಿ ಶಾಲಾ-ಕಾಲೇಜು ಪುನರಾರಂಭದ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮಕ್ಕಳಿಗೆ ಸೋಂಕು ಹೆಚ್ಚಾದರೆ ಎಂದು ಮುಂಜಾಗ್ರತಾ ಕ್ರಮವಾಗಿ ಜನವರಿ 29 ರ ತನಕ ಶಾಲಾ-ಕಾಲೇಜುಗಳು ರಜೆ ಘೋಷಿಸಲಾಗಿದೆ.
ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಎಲ್ಲೆಡೆ ಶಾಲಾ-ಕಾಲೇಜುಗಳು ನಡೆಯಲಿದೆ. ಜನವರಿ 29ರ ನಂತರ ಸಭೆ ನಡೆಸಿ, ಶಾಲೆಗಳ ಪುನರಾರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಬೆಂಗಳೂರು ಹೊರತುಪಡಿಸಿ ರಾಜ್ಯದ ಉಳಿದ ಶಾಲಾ-ಕಾಲೇಜುಗಳ ನಿರ್ಧಾರ ಸ್ಥಳೀಯ ಆಡಳಿತಕ್ಕೆ
ಬಿಟ್ಟಿದ್ದು, ಯಾವುದೋ ಶಾಲೆಗಳಲ್ಲಿ ಹೆಚ್ಚು ಸೋಂಕು ಕಂಡುಬಂದರೆ 5 ರಿಂದ 7 ಏಳು ದಿನಗಳ ಕಾಲ ಶಾಲೆ ಬಂದ್ ಮಾಡಲಾಗುವುದು ಎಂದರು.
ಐದು ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಈ ಪೈಕಿ ಶೇ 5 ರಷ್ಟು ಮಕ್ಕಳಿಗೆ ಮಾತ್ರ ಸೋಂಕು ಪತ್ತೆಯಾಗಿದೆ. ತುಮಕೂರು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ.
ಇದನ್ನು ಒದಿ : https://cnewstv.in/?p=7806
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments