Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.37 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 10,050 ಕ್ಕೆ ಏರಿಕೆ.

Cnewstv.in / 22.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.37 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 10,050 ಕ್ಕೆ ಏರಿಕೆ.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,37,704 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 488 ಜನ ಸಾವನ್ನಪ್ಪಿದಾರೆ.

ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.

2,42,676 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21,13,365 ಇದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,89,03,731 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,88,884 ಕ್ಕೆ ಏರಿಕೆಯಾಗಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,63,01,482 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 1,61,16,60,078 ಜನರಿಗೆ ಲಸಿಕೆ ನೀಡಲಾಗಿದೆ.

ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.

ಇದನ್ನು ಒದಿ : https://cnewstv.in/?p=7817

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*