Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೋವಿಡ್ ಹರಡದಂತೆ ತಡೆಯಲು ವಿದ್ಯಾರ್ಥಿಗಳ ಮೇಲೆ ನಿಗಾ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ. ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು. ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಲಸಿಕೆ ಪಡೆದವರ ಪ್ರಮಾಣ ರಾಜ್ಯಮಟ್ಟಕ್ಕೆ ಹೋಲಿಸಿದರೆ ಕಡಿಮೆಯಿದೆ. ಅಭಿಯಾನದ ರೀತಿಯಲ್ಲಿ ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡಬೇಕು. ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮೂರನೇ ಡೋಸ್ ನೀಡುವ ಕಾರ್ಯವನ್ನು ಚುರುಕುಗೊಳಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟೀವ್ ವ್ಯಕ್ತಿಗಳ ಹೋಂ ಕ್ವಾರೆಂಟೈನ್ ಪ್ರಮಾಣ ಶೇ.೯೫ರಷ್ಟಿದ್ದು, ಪ್ರಾಥಮಿಕ ಸಂಪರ್ಕಿತರಿಗೆ ಕನಿಷ್ಟ ೩ದಿನ ಹೋಂ ಕ್ವಾರೆಂಟೈನ್ ಖಾತ್ರಿಪಡಿಸಬೇಕು. ಹೋಂ ಕ್ವಾರೆಂಟೈನ್‌ನಲ್ಲಿರುವವರಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ಬಂದರೆ ಅಂತಹ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸದೆ, ವಸತಿ ನಿಲಯವನ್ನು ಸೀಲ್‌ಡೌನ್ ಮಾಡಿ ವಿದ್ಯಾರ್ಥಿಗಳನ್ನು ಅಲ್ಲಿಯೇ ಇರಿಸಿಕೊಳ್ಳಬೇಕು ಎಂದು ಹೇಳಿದರು.
ಇದನ್ನು ಒದಿ : https://cnewstv.in/?p=7855
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments