Breaking News

Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Vaccination : ದೇಶದಲ್ಲೇ ಕರ್ನಾಟಕ ರಾಜ್ಯ ನಂಬರ್ ಒನ್. ಶೇ.100 ರಷ್ಟು ಮೊದಲ ಡೇಸ್

ಬೆಂಗಳೂರು : ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೊದಲು ಮತ್ತು ಎರಡನೇ ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ಇದೀಗ 60 ವರ್ಷ ಮೇಲ್ಪಟ್ಟವರಿಗೆ ಮೂರನೇ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ.

ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲು ಶೇ. ನೂರರಷ್ಟು ಮೊದಲನೇ ಲಸಿಕೆಯನ್ನು ಪಡೆದ ರಾಜ್ಯವಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.‌

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಸುಮಾರು 4,89,16,000 ಮಂದಿ ಅರ್ಹರಿದ್ದು, ಅವರೆಲ್ಲರಿಗೂ ಮೊದಲ ಡೋಸ್ ನೀಡಲಾಗಿದೆ. ಎರಡನೇ ಡೋಸ್ ಲಸಿಕೆಯನ್ನು ಶೇ. 85 ರಷ್ಟು ಮಂದಿ ಪೂರ್ಣಗೊಳಿಸಿ ಕೊಂಡಿದ್ದಾರೆ.

ಒಂದು ವರ್ಷ ಏಳು ದಿನಗಳಲ್ಲಿ ನಾವು ಶೇ. ನೂರರಷ್ಟು ಮೊದಲನೇ ಡೋಸ್ ಪೂರ್ಣ ಮಾಡಿದ್ದೇವೆ. ಕರ್ನಾಟಕ ಈ ಸಾಧನೆ ಮಾಡಿದ ದೇಶದ ಮೊದಲ ರಾಜ್ಯವಾಗಿದೆ. ಈ ಸಾಧನೆಗೆ ಸಹಕರಿಸಿದ ಎಲ್ಲಾ ಆರೋಗ್ಯ ಕರ್ತರಿಗೆ ಜಿಲ್ಲಾಡಳಿತಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನು ಒದಿ : https://cnewstv.in/?p=7862

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*