Breaking News

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ವಿಡಿಯೋ ಚಿತ್ರೀಕರಣ ಮಾಡಿ ಹೆದರಿಸುತ್ತಿದ್ದ ಆರೋಪಿಗಳು ಅಂದರ್

Cnewstv.in / 23.01.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ವಿಡಿಯೋ ಚಿತ್ರೀಕರಣ ಮಾಡಿ ಹೆದರಿಸುತ್ತಿದ್ದ ಆರೋಪಿಗಳು ಅಂದರ್

ಹೊಸನಗರ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ನಡೆಸಿ ಚಿತ್ರೀಕರಣ ಮಾಡಿ,‌ ಹೆದರಿಸುತ್ತಿದ್ದ ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸನಗರದ ಬಸ್ ನಿಲ್ದಾಣದ ಬಳಿ ನಿಂತಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯನ್ನು, ಆಕೆಯ ಮನೆಯಲ್ಲಿ ಜಿಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯ ಮಾಡಿಕೊಂಡಿದ್ದ ಸಂತೋಷ್ ಮತ್ತು ಸುನಿಲ್ ಎಂಬುವವರು, ನಿಮ್ಮ ಗ್ರಾಮದ ಕಡೆಗೆ ಹೋಗುತ್ತಿದ್ದೇವೆ ಎಂದು ಆಕೆಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ನಂತರ ಆಕೆಯನ್ನು ಸುನೀಲನ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಅಶ್ಲೀಲ ವಿಡಿಯೋವನ್ನು ಚಿತ್ರೀಕರಣ ಮಾಡಿ ಈ ವಿಷಯವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆಯನ್ನೂ ಹಾಕಿದ್ದಾರೆ. ಪುನಃ ಕರೆದಾಗ ಬಾಲಕಿಯು ನಿರಾಕರಿಸಿದಾಗ ವಿಡಿಯೋವನ್ನು ರಾಘವೇಂದ್ರ, ಸಚಿನ್ ಮತ್ತು ಸುಬ್ಬು ಎನ್ನುವವರ ಮೊಬೈಲಿಗೆ ಕಳುಹಿಸಿದ್ದಾರೆ.

ಬಾಲಕಿ ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.‌ ಬಾಲಕಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡ ಹೊಸನಗರ ಪಿಎಸ್ಐ ಮತ್ತು ಸಿಬ್ಬಂದಿಗಳ ತಂಡ ಆರೋಪಿಗಳಾದ ಸಂತೋಷ್ ಮತ್ತು ಸುನಿಲ್ ನನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನು ಒದಿ : https://cnewstv.in/?p=7874

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*