Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ.
ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರು ಇಲ್ಲಿ 2021-22ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಜಿಸಿಇಟಿ ಬರೆಯದೆ ಇರುವ ಬಿ.ಇ.-ಮೆಕ್ಯಾನಿಕಲ್/ಇಂಡಸ್ಟ್ರಿಯಲ್ ಪ್ರೊಡಕ್ಷನ್/ಆಟೋಮೊಬೈಲ್/ಆಟೊಮೇಷನ್/ಮೇರಿನ್ ಇಂಜಿನಿಯರಿಂಗ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳÀಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಸಂಸ್ಥೆಯಲ್ಲಿ ಕೈಗಾರಿಕಾ ಘಟಕವಿರುವುದರಿಂದ ವಿದ್ಯಾರ್ಥಿಗಳಿಗೆ ಸಿಎನ್‍ಸಿ ಯಂತ್ರದಲ್ಲಿ, ರೊಬೋಟಿಕ್ಸ್ ಹಾಗೂ 3ಡಿ ಪ್ರಿಂಟಿಂಗ್‍ನಲ್ಲಿ ಕೆಲಸ ಮಾಡಬಹುದಾಗಿದ್ದು ಇದಕ್ಕೆ ಬೇಕಾದಂತಹ ನೂತನ ತಂತ್ರಜ್ಞಾನ ಹಾಗೂ ಉಂತ್ರೋಪಕರಣಗಳು ಲಭ್ಯವಿದೆ.
ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುವುದು ಮತ್ತು ಇಲ್ಲಿಯವರೆಗೆ ಎಲ್ಲಾ ಪಾಸಾದಂತಹ ವಿದ್ಯಾರ್ಥಿಗಳಿಗೆ ಉದ್ಯೋಗವು ಲಭಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು – 16. ಮೊಬೈಲ್ ನಂ : 9243989954/9141630303 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ತರಬೇತಿ ವ್ಯವಸ್ಥಾಪಕರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=7909
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv