Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಲಹಾ ಸಮಿತಿ ರಚನೆಗೆ ನಾಮ ನಿರ್ದೇಶಿಸಲು ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮಿಸಲಾತಿ ಕಲ್ಪಿಸುವಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಸಲಹಾ ಸಮಿತಿಯನ್ನು ರಚಿಸಲು ಉದ್ದೇಶಿಸಿದ್ದು, ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯನ್ನು ನಾಮ ನಿರ್ದೇಶಿಸುವ ಬಗ್ಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಮಟ್ಟದ ಅಲೆಮಾರಿ/ಅರೆಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯವರು ಅಗತ್ಯ ದಾಖಲಾತಿಗಳೊಂದಿಗೆ ದಿ: 31/01/2022 ರೊಳಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇಲ್ಲಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಹಿತಿಗಾಗಿ ದೂ.ಸಂ.: 08182-222129 ನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=7926
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv