Breaking News

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್ ನ ಹಿರಿಯ ನಾಯಕ ಆರ್.ಪಿ.ಎನ್. ಸಿಂಗ್

Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್ ನ ಹಿರಿಯ ನಾಯಕ ಆರ್.ಪಿ.ಎನ್. ಸಿಂಗ್

ನವದೆಹಲಿ : ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆರ್.ಪಿ.ಎನ್ ಸಿಂಗ್ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದನ್ನು ಖಚಿತಪಡಿಸಿದ್ದಾರೆ.‌ ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದು ನನಗೆ ಹೊಸ ಆರಂಭವಾಗಿದೆ ಮತ್ತು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ನನ್ನ ಕೊಡುಗೆಯನ್ನು ನೀಡಲು ಎದುರು ನೋಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಆರ್ ಪಿಎನ್ ಸಿಂಗ್, ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಷ್ಟ್ರ, ಜನರು ಮತ್ತು ಪಕ್ಷಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ಇಂದು, ನಾವು ನಮ್ಮ ಮಹಾನ್ ಗಣರಾಜ್ಯ ರಚನೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ನನ್ನ ರಾಜಕೀಯ ಪ್ರಯಾಣದಲ್ಲಿ ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತೇನೆ. ಜೈ ಹಿಂದ್” ಎಂದು ಸಿಂಗ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಇದನ್ನು ಒದಿ : https://cnewstv.in/?p=7930

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*