Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಾಚೇನಹಳ್ಳಿ ಡೈರಿ ಬಳಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು.
ಶಿವಮೊಗ್ಗ : ಮಾಚೇನಹಳ್ಳಿ ಡೈರಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಶಿವಮೊಗ್ಗದಿಂದ ಭದ್ರಾವತಿಯ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ (39) ಮತ್ತು ರಾಮಚಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ಭದ್ರಾವತಿಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಒದಿ : https://cnewstv.in/?p=7944
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv