Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.86 ಲಕ್ಷ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33.

Cnewstv.in / 27.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.86 ಲಕ್ಷ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,86,384. ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 573 ಜನ ಸಾವನ್ನಪ್ಪಿದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 17.75% ಕ್ಕೆ ಏರಿಕೆಯಾಗಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33 ರಷ್ಟಿದೆ.

2,99,073 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472 ಇದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,03,71,500 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,91,700 ಕ್ಕೆ ಏರಿಕೆಯಾಗಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,73,70,971 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 162.26 ಡೋಸ್ ಲಸಿಕೆ ನೀಡಲಾಗಿದೆ.

ಭಾರತ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.

ಇದನ್ನು ಒದಿ : https://cnewstv.in/?p=7950

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*