Breaking News

ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ.

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ.

ಶಿವಮೊಗ್ಗ : ನಗರದ ಕನ್ಸರ್ ವೆನ್ಸಿಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ನಗರದಲ್ಲಿರುವ ಕನ್ಸರ್ ವೆನ್ಸಿಗಳನ್ನು ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಹಾಗೂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದರು.

ನಗರದ ಅನೇಕ ಕಡೆಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ಅಭಿವೃದ್ಧಿಪಡಿಸಿದ ಪುಟ್ ಪಾತ್ ಮೇಲೆ ತಮ್ಮ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳು ಅವರನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರ ಹಿತರಕ್ಷಣಾ ಸಮಿತಿ ವ್ಯಾಪಾರಸ್ಥರಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿತ್ತು. ಅವರ ಜೀವನೋಪಾಯಕ್ಕೆ ತೊಂದರೆಯಾಗದ ರೀತಿಯಲ್ಲಿ ಹಂತಹಂತವಾಗಿ ಅವರ ಮನವೊಲಿಸಿ ಅಭಿವೃದ್ಧಿಪಡಿಸಿದ ಕನ್ಸರ್ ವೆನ್ಸಿಗಳಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮೇಯರ್ ಸುನೀತಾ ಅಣ್ಣಪ್ಪ ತಿಳಿಸಿದರು.

ಇದನ್ನು ಒದಿ : https://cnewstv.in/?p=7974

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*