Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಖೇಲೋ ಇಂಡಿಯಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ.
ಶಿವಮೊಗ್ಗ : ಕೇಂದ್ರ ಪುರಸ್ಕøತ ಖೇಲೋ ಇಂಡಿಯಾ ಯೋಜನೆಯಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದು, ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗೆ ಸಂಬಂಧಿಸಿದಂತೆ ಖೇಲೋ ಇಂಡಿಯಾ ಕೇಂದ್ರವನ್ನು ಸ್ಥಾಪಿಸಲು ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕಗಳಿಸಿದ ಆಸಕ್ತ ಅಥ್ಲೇಟಿಕ್ಸ್ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ದಿ: 04/02/2022 ರೊಳಗಾಗಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-223328ನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=8018
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv