Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಚಾಲಕನ ನಿಯಂತ್ರಣ ತಪ್ಪಿ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್
ಶಿವಮೊಗ್ಗ : ಅಯನೂರು ಮುಖ್ಯ ರಸ್ತೆಯ ಮೆಸ್ಕಾಂ ಕಚೇರಿ ಎದುರು ಖಾಸಗಿ ಬಸ್ಸೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದ್ದು 3 ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರು ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಕಾಲು ಮುರಿದಿದ್ದು, ಒಬ್ಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳನ್ನು ಅಲ್ಲಾಭಕ್ಷಿ, ಸನು, ರಾಹುಲ್ ಎಂದು ಗುರುತಿಸಲಾಗಿದೆ.ಘಟನೆ ಸಂಬಂಧಿಸಿದಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಒದಿ : https://cnewstv.in/?p=8027
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv