Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕನ್ಸರ್ ವೆನ್ಸಿ ಯನ್ನು ಸೂಕ್ತವಾಗಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ : ಅಣ್ಣಾ ಹಜಾರೆ ಹೋರಾಟ ಸಮಿತಿ
ಶಿವಮೊಗ್ಗ : ಕನ್ಸರ್ ವೆನ್ಸಿ ಸೂಕ್ತವಾಗಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆ ಕಮಿಷನರ್ ಕಚೇರಿ ಮುಂಭಾಗ ಧರಣಿ ನಡೆಸಲಾಯಿತು.
LLR ರಸ್ತೆಯ CS ಆಸ್ಪತ್ರೆ ಹಿಂಭಾಗದ ಅಭಿವೃದ್ಧಿಪಡಿಸಿರುವ ಕನ್ಸರ್ ವೆನ್ಸಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಿಲ್ಲ. ಪರಿಣಾಮವಾಗಿ ಅನೇಕ ಕಡೆ ಒತ್ತುವರಿಯಾಗಿದೆ, ಅಲ್ಲದೆ ಅನೈತಿಕ ಚಟುವಟಿಕೆಗಳು ಸಹ ನಡೆಯುತ್ತಿದೆ.
ಅದನ್ನು ಸರಿಪಡಿಸುವಂತೆ ಹಲವು ಬಾರಿ ಕಮಿಷನರ್ ಹಾಗೂ ಮೇಯರ್ ಗೆ ಮನವಿ ಸಲ್ಲಿಸಿದರು ಸಹ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಕೆಲಕಾಲ ಮೇಯರ್ ಹಾಗೂ ಸಮಿತಿಯ ಸದಸ್ಯರ ನಡುವೆ ವಾಗ್ವಾದ ನಡೆಯಿತು.
ಕೂಡಲೇ ಪಾಲಿಕೆ ಕಮಿಷನರ್ ಆಗಮಿಸಿ, ಸ್ಥಳ ಪರಿಶೀಲನೆ ನಡೆಸಬೇಕು. ಆಗಿರುವ ಸಮಸ್ಯೆಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನು ಒದಿ : https://cnewstv.in/?p=8029
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv