Cnewstv.in / 29.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ??
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬಿ.ಸಿ.ನಾಗೇಶ್, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಗರ ಪೊಲೀಸರ್ ಅಯುಕ್ತರಾದ ಕಮಲ್ ಪಂಥ್ ಭಾಗವಹಿಸಿದ್ದರು.
ಸಭೆಯ ನಂತರ ಮಾತನಾಡಿದ ಆರ್ ಅಶೋಕ್
ರಾಜ್ಯದ ಜನರಿಗೆ ಸಿಹಿ ಸುದ್ದಿಯೊಂದನ್ನು ತಿಳಿಸಿದ್ದಾರೆ. ರಾಜ್ಯಾದ್ಯಂತ ವಿಧಿಸಲಾಗಿದ್ದ ನೈಟ್ ಕರ್ಫ್ಯೂ ವನ್ನು ಹಿಂಪಡೆಯಲಾಗಿದೆ.
ನಂತರ ಮಾತನಾಡಿದ ಶಿಕ್ಷಣ ಸಚಿವ, ನಾಗೇಶ್, ಎಲ್ಲಾ ಕಡೆ ತರಗತಿಗಳು ಸೋಮವಾರದಿಂದ ಆರಂಭವಾಗುತ್ತದೆ. ಒಂದುವೇಳೆ ತರಗತಿಗಳಲ್ಲಿ ಪಾಸಿಟಿವ್ ಕಂಡುಬಂದರೆ ಆ ತರಗತಿಗಳನ್ನು ಮಾತ್ರ ಮುಚ್ಚಲಾಗುತ್ತದೆ. ಇಡೀ ಶಾಲೆಯನ್ನು ಮುಚ್ಚುವುದಿಲ್ಲ ಒಂದು ವೇಳೆ ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾದರೆ ಶಾಲೆಗಳನ್ನು ಮುಚ್ಚುವುದರ ಬಗ್ಗೆ ನಿರ್ಧಾರವನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳಲಿದ್ದಾರೆ ಎಂದರು.
ಸಭೆಯಲ್ಲಿ ತೆಗೆದುಕೊಂಡ ಕೆಲವು ಪ್ರಮುಖ ನಿರ್ಧಾರಗಳು..
* ಹೋಟೆಲ್, ಬಾರ್, ಕ್ಲಬ್ ಪೂರ್ಣ ಪ್ರಮಾಣದಲ್ಲಿ ಓಪನ್
* ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.
* ಸರ್ಕಾರದ ಸಚಿವಾಲಯದಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದುಪಡಿಸಿ ಶೇ. 100 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.
*ಧಾರ್ಮಿಕ ಸ್ಥಳಗಳಲ್ಲಿ ಸೇವೆಗಳಿಗೆ ಅವಕಾಶ.
* ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇಂತರ ಸ್ಥಳಗಳಲ್ಲಿ ಶೇ. 50 ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ.
* ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
* ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
* ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.
* ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಯಿತು.
*ಎಲ್ಲ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್‍ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
*ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.
ಇದನ್ನು ಒದಿ : https://cnewstv.in/?p=8040
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments