Cnewstv.in / 31.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ದೇಶಾದ್ಯಂತ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,09,918 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 959 ಜನ ಸಾವನ್ನಪ್ಪಿದಾರೆ.
2,62,628 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,95,050 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,89,76,122 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 165.04 ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=8054
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv