Breaking News

ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್

Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್

ಬೆಂಗಳೂರು : ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಆಯ್ಕೆಯಾಗಿದ್ದಾರೆ.

ANCC ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ರವರನ್ನು ನೇಮಕ ಮಾಡಲಾಗಿದೆ ಎಂದು IYC ಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ರವರು ಆದೇಶ ಪತ್ರವನ್ನು ನೀಡಿದ್ದಾರೆ.

ಇಂದು ರಕ್ಷಾ ರಾಮಯ್ಯ ಘೋಷಿತ ಅಧಿಕಾರವಧಿ ಮುಕ್ತಾಯವಾಗಿದೆ. ಫೆಬ್ರವರಿ 10ರಂದು ಅಧಿಕೃತವಾಗಿ ಕೆಪಿಸಿಸಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರವಾಗಲಿದೆ. ಅದು ಎಲ್ಲಾ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜೊತೆಯಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಲಿದ್ದಾರೆ.

ಅದಕ್ಕೂ ಮುನ್ನ ಇಂದು ಕಾಂಗ್ರೆಸ್ ಭವನದಲ್ಲಿ ಪೂಜೆ ಸಲ್ಲಿಸಿದರು. ಹಾಗೂ ಸರ್ವ ಧರ್ಮಗಳನ್ನು ಪ್ರಾರ್ಥನೆ ಮಾಡಿ ಅಧಿಕಾರ ಸ್ವೀಕರಿಸಿದ್ದಾರೆ.‌

ಒಟ್ಟಿನಲ್ಲಿ ಮೊಹಮ್ಮದ್ ನಲಪಾಡ್ ಆಯ್ಕೆಯಿಂದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಇದ್ದಂತಹ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಇದನ್ನು ಒದಿ : https://cnewstv.in/?p=8064

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

 

 

 

Leave a Reply

Your email address will not be published. Required fields are marked *

*