Breaking News

ಅರ್ಜಿ ಅವಧಿ ವಿಸ್ತರಣೆ

Cnewstv.in / 02.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಅರ್ಜಿ ಅವಧಿ ವಿಸ್ತರಣೆ

ಶಿವಮೊಗ್ಗ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ವಿದ್ಯಾರ್ಥಿವೇತನ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿಯನ್ನು ದಿ:31/01/2022 ರಿಂದ ದಿ: 28/02/2022 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ: 28/02/2022 ರವರೆಗೆ ವಿಸ್ತರಿಸಲಾಗಿದ್ದು, ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ www.bcwd.karnataka.gov.in ವೆಬ್‍ಸೈಟ್ ಹಾಗೂ ಸಹಾಯವಾಣಿ 8050770005 / 8050770004/ 08182-2222129 ಹಾಗೂ ದೂರವಾಣಿ ಸಂಖ್ಯೆ 080-35254757 ನ್ನು ಸಂಪರ್ಕಿಸಬಹುದು.

ಇದನ್ನು ಒದಿ : https://cnewstv.in/?p=8138

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*