Breaking News

ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಮುಂಬೈ ಕೋರ್ಟ್..

Cnewstv.in / 03.02.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಮುಂಬೈ ಕೋರ್ಟ್..

ಮುಂಬಯಿ : ರಾಷ್ಟ್ರಗೀತೆಗೆ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯವರಿಗೆ ಮುಂಬಯಿ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋಟ್ ಮಾರ್ಚ್ 2 ರ ಒಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದೆ.

ಕಳೆದ ಡಿಸೆಂಬರ್ 2021ರಂದು ಮುಂಬಯಿ ನಗರಕ್ಕೆ ಭೇಟಿ ನೀಡಿದ್ದ ಮಮತಾ ಬ್ಯಾನರ್ಜಿಯವರು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಮಮತಾ ಬ್ಯಾನರ್ಜಿ ರಾಷ್ಟ್ರಗೀತೆ ಆರಂಭವಾದಾಗ ಎದ್ದು ನಿಲ್ಲದೇ ಕುಳಿತುಕೊಂಡಿದ್ದರು. ನಂತರ ಎದ್ದುನಿಂತು ಎರಡು ಸಾಲುಗಳನ್ನು ಹಾಡಿ ಥಟ್ಟನೆ ನಿಲ್ಲಿಸಿ, ರಾಷ್ಟ್ರಗೀತೆಗೆ ಅಗೌರವ ತೋರಿಸಿದ್ದಾರೆ ಎಂದು ಅರೋಪಿಸಲಾಗಿದೆ.

ಈ ಕುರಿತು ಬಿಜೆಪಿ ಕಾರ್ಯಕಾರಿ, ವಕೀಲ ವಿವೇಕಾನಂದ ಗುಪ್ತಾ ಅವರು ರಾಷ್ಟ್ರೀಯ ಘನತೆಗೆ ಅವಮಾನ ತಡೆ ಕಾಯಿದೆ 1971ರ ಸೆಕ್ಷನ್ 3 ರ ಅಡಿಯಲ್ಲಿ ಪಶ್ಚಿಮ ಬಂಗಾಳ ಸಿಎಂ ವಿರುದ್ಧ ದೂರು ದಾಖಲಿಸಿ, ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದ್ದರು.

ಯಾವುದೇ ಸಂದರ್ಭದಲ್ಲಿ ಯಾರಾದರೂ ರಾಷ್ಟ್ರಗೀತೆ ಹಾಡುತ್ತಿರಲಿ ಅಥವಾ ಇನ್ಯಾವುದೇ ಮೂಲದಿಂದ ಅದು ಪ್ರಸಾರವಾಗುತ್ತಿರಲಿ, ಆ ಸಮಯದಲ್ಲಿ ಅದನ್ನು ಕೇಳುತ್ತಿರುವವರು ಎದ್ದುನಿಲ್ಲಬೇಕು ಎಂದು 2015ರಲ್ಲಿ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಅದನ್ನು ಮಮತಾ ಬ್ಯಾನರ್ಜಿ ಉಲ್ಲಂಘಿಸಿದ್ದಾರೆ ಎಂದು ವಿವೇಕಾನಂದ ಗುಪ್ತಾ ಆರೋಪಿಸಿದ್ದಾರೆ.

ಈ ಕುರಿತು ಆರಂಭಿಕ ವಿಚಾರಣೆ ನಡೆಸಿರುವ ಮುಂಬಯಿ ನ್ಯಾಯಾಲಯ, ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯ ಸೆಕ್ಷನ್ 3(Prevention of Insults to National Honour Act, 1971)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂಬುದು ಮೆಲ್ನೋಟಕ್ಕೆ ಸಾಬೀತಾಗುತ್ತದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 2ರೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಮಮತಾ ಬ್ಯಾನರ್ಜಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಇದನ್ನು ಒದಿ : https://cnewstv.in/?p=8154

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*