Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಹಿಳೆಯರಿಗೆ ತರಬೇತಿ ಕಾರ್ಯಗಾರ
ಶಿವಮೊಗ್ಗ : ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಸಾಮಾಜಿಕ ಕ್ರೂಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ದಿ ಉಪಘಟಕದಡಿ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗೆ (SHGs) ಹಾಗೂ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರುಗಳಿಗೆ ALFs) ವಿವಿಧ ಸಾಮಥ್ರ್ಯಾಭಿವೃದ್ದಿ ತರಬೇತಿ ಕಾರ್ಯಗಾರವನ್ನು ಫೆ.04 ರ ಬೆಳಿಗ್ಗೆ 10 ಗಂಟೆಗೆ ವಿನೋಬನಗರದ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಕುಮಾರಿ ಅಮೃತಾ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪ ಮಹಾಪೌರರಾದ ಶಂಕರ್(ಗನ್ನಿ), ಪಾಲಿಕೆ ಆಯುಕ್ತ ಚಿದಾನಂದ ಎಸ್ ವಟಾರೆ ಪಾಲ್ಗೊಳ್ಳುವರು. ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ(ಚನ್ನಿ) ಅಧ್ಯಕ್ಷತೆ ವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ವೈದ್ಯೆ ಡಾ.ಮೈಥಿಲಿ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನ ಶಂಕರಪ್ಪ, ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಅಭಿಯಾನ ವ್ಯವಸ್ಥಾಪಕ ಕಾಶಿನಾಥ್, ನಿವೃತ್ತ ಬ್ಯಾಂಕ್ ಅಧಿಕಾರಿ ಪಟ್ಟಾಭಿರಾಮ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಇದನ್ನು ಒದಿ : https://cnewstv.in/?p=8154
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv