Cnewstv.in / 03.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.49ಲಕ್ಷ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,49,394 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,072 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಪಾಸಿಟಿವಿಟಿ ದರ ಶೇ. 10.99 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.95.39 ರಷ್ಟಿದೆ.
2,46,764 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 14,35,569 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 5,00,055 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 4,00,17,088 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 168.48 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=8171
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv