Cnewstv.in / 05.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,27,952 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,059 ಜನ ಸಾವನ್ನಪ್ಪಿದಾರೆ.
2,30,814 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,20,80,664 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 5,01,114 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 4,02,47,902 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 168.98 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=8191
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv