Cnewstv.in / 05.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹಿಜಾಬ್-ಕೇಸರಿಶಾಲು ವಿವಾದ ತೆರೆ ಎಳೆದ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯ
ಬೆಂಗಳೂರು : ಹಿಜಾಬ್-ಕೇಸರಿಶಾಲು ವಿವಾದಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಆದೇಶ ನೀಡಿದೆ.
ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿರವಸ್ತ್ರ ಅಥವಾ ಹಿಜಾಬ್ ಹಾಕಿಕೊಂಡು ಅಥವಾ ತಲೆಯನ್ನು ಮುಚ್ಚಿಕೊಂಡು ಶಾಲೆಗೆ ಬರದಂತೆ ತಡೆಯುವುದು ಸಂವಿಧಾನದ ಉಲ್ಲಂಘನೆ ಅಲ್ಲವೆಂದು ಸುಪ್ರೀಂ ಕೋರ್ಟ್ ಮತ್ತು ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ಈಗಾಗಲೇ ತೀರ್ಪು ನೀಡಿವೆ. ಹೀಗಾಗಿ, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರ ಧರಿಸಬೇಕು ಎಂದೂ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಆಯಾ ಕಾಲೇಜುಗಳ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಅಥವಾ ಆಡಳಿತ ಮಂಡಳಿಗಳ ಮೇಲ್ವಿಚಾರಣಾ ಸಮಿತಿಯು ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೇ ಇದ್ದರೆ ಸಮಾನತೆ ಮತ್ತು ಏಕತೆಯನ್ನು ಕಾಪಾಡಿಕೊಂಡು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸಬೇಕು ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಇದನ್ನು ಒದಿ : https://cnewstv.in/?p=8198
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv