Cnewstv.in / 05.02.2022 / ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಸಚಿವ..! ವಿಡಿಯೋ ವೈರಲ್..
ಲಕ್ನೋ : ಚುನಾವಣಾ ಅಭ್ಯರ್ಥಿಯೊಬ್ಬರು ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಘಟನೆ ತಿವಾರಿಯಲ್ಲಿ ನಡೆದಿದೆ.
ಈ ರೀತಿ ಓಡಿ ಬಂದು ನಾಮಪತ್ರವನ್ನು ಸಲ್ಲಿಸಿದವರು ಕ್ರೀಡಾ ಸಚಿವ ಉಪೇಂದ್ರ ತಿವಾರಿಯವರು. ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಲ್ಲಿಯಾ ಜಿಲ್ಲೆಯ ಫೆಫ್ನಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು ಅದರಂತೆ ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕಚೇರಿಯವರೆಗೂ ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕೇಸರಿ ಶಾಲು ಹಾಗೂ ಹಾರವನ್ನು ಧರಿಸಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಕ್ರೀಡಾ ಸಚಿವ ಉಪೇಂದ್ರ ತಿವಾರಿ ಅವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಫೆಬ್ರವರಿ 10 ರಿಂದ ಉತ್ತರಪ್ರದೇಶ ವಿಧಾನಸಭಾ ಚುನಾವಣೆ 7 ಹಂತಗಳಲ್ಲಿ ನಡೆಯಲಿದೆ. ಮಾ.10 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇದನ್ನು ಒದಿ : https://cnewstv.in/?p=8200
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments