Cnewstv.in / 06.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಲಾರಾ ಪ್ರಕರಣ, ಹತ್ತು ಲಕ್ಷ ಬಾಂಡ್ ಪಡೆದು, ಖಡಕ್ ಎಚ್ಚರಿಕೆ ನೀಡಿದ ಖಾಕಿ..
ಬೆಂಗಳೂರು : ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೀದಿನಾಯಿ ಲಾರಾ ಮೇಲೆ ಆಡಿ ಕಾರ್ ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉದ್ಯಮಿ ಆದಿಕೇಶವಲು ಮೊಮ್ಮಗನಾದ ಹಾದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧನವಾದ ಕೆಲವೇ ಗಂಟೆಗಳಲ್ಲಿ ಠಾಣಾ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.
ಇದೀಗ ಪೊಲೀಸರು ಆದಿನಾರಾಯಣ ರೆಡ್ಡಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಭವಿಷ್ಯದಲ್ಲಿ ಯಾವುದೇ ಪ್ರಾಣಿಹಿಂಸೆ ಕೃತ್ಯದಲ್ಲಿ ತೊಡಗಿದ್ದಾರೆ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ
ಅದರೆ ಆರೋಪಿ ಆದಿ ಪೊಲೀಸರ ಮುಂದೆ ಕಾರ್ ಚಾಲನೆ ವೇಳೆ ಮೊಬೈಲ್ ನೋಡುತ್ತಿರುವಾಗ ಈ ಅವಘಡ ಸಂಭವಿಸಿದೆ. ಇದು ಉದ್ದೇಶಪೂರ್ವಕವಾದ ಘಟನೆ ಅಲ್ಲ ಎಂದು ಹೇಳಿದ್ದಾನೆ.
ಘಟನೆ ವಿವರ :
ಜನವರಿ 26ರ ಸಂಜೆ 6.15ರ ಸುಮಾರಿಗೆ ರಸ್ತೆ ಬದಿಯಲ್ಲಿ ಮಲಗಿದ್ದ ಬೀದಿ ನಾಯಿ ಮೇಲೆ ಉದ್ಯಮಿ ಆದಿಕೇಶವುಲು ನಾಯ್ಡು ಮೊಮ್ಮಗ ಕಾರು ಹತ್ತಿಸಿದ್ದರು. ಇದನ್ನು ಉದ್ದೇಶಪೂರ್ವಕವಾಗಿ ಹತ್ತಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು.
ಕಾರು ಹತ್ತಿಸಿ ಬೀದಿನಾಯಿ ಸಾವು ಪ್ರಕರಣ ಸಂಬಂಧ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಬಂಧಿತ ಕಾರು ಚಾಲಕ ಆದಿಕೇಶವನನ್ನ ತರಾಟೆಗೆ ತೆಗೆದುಕೊಂಡಿದ್ದರು. ಇದೇ ರೀತಿ ಸ್ಯಾಂಡಲ್ ವುಡ್ ನಟಿ ರಮ್ಯಾ ಸಹ ಆರೋಪಿಯ ಮೃಗೀಯ ವರ್ತನೆಯನ್ನ ಖಂಡಿಸಿದ್ದರು.
ಮಲಗಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದ ಕಾರು ಚಾಲಕ ಆದಿಕೇಶವನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಆದಿಕೇಶವಲು ನಾಯ್ಡು ಮೊಮ್ಮಗ ಆದಿ ಎಂಬಾತನ ವಿರುದ್ಧ ಬದ್ರಿಪ್ರಸಾದ್ ಎಂಬುವರು ದೂರು ನೀಡಿದ್ದರು.
ಜನವರಿ 29 ರಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಬದ್ರಿ ಪ್ರಸಾದ್ ಎಂಬುವರು ದೂರು ನೀಡಿದ್ದರು. ಜ. 31 ರ ಬೆಳಗ್ಗೆ ಘಟನೆ ನಡೆದ ಪಕ್ಕದ ರಸ್ತೆಯ ಚರಂಡಿಯಲ್ಲಿ ಲಾರಾ ಮೃತದೇಹ ಪತ್ತೆಯಾಗಿತ್ತು.
ಇದನ್ನು ಒದಿ : https://cnewstv.in/?p=8206
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv