Breaking News

ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್..

Cnewstv.in / 06.02.2022 / ಮುಂಬೈ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್..

ಮುಂಬೈ : ಭಾರತದ ನೈಟಿಂಗೇಲ್‌ ಎಂದೇ ಪ್ರಸಿದ್ಧವಾಗಿರುವ ಲತಾ ಮಂಗೇಶ್ಕರ್‌ (92) ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ(Breach candly hospital) ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಜನವರಿ 8 ರಂದು ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದು ಹಿನ್ನಲೆಯಲ್ಲಿ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಮಾಡಲಾಗುತ್ತು. ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿತ್ತು ಎಂದು ಹೇಳಲಾಗುತ್ತಿತ್ತು. ಅದರೆ ಇದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಲತಾ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

ಲತಾ ಮಂಗೇಶ್ಕರ್ ಅವರುರನ್ನು ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲಾಗುತ್ತಿತ್ತು. ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ.

ಇದನ್ನು ಒದಿ : https://cnewstv.in/?p=8209

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*