Breaking News

ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ‌. ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ.

Cnewstv.in / 06.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ‌. ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ.

ಬೆಂಗಳೂರು : ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ‌. ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ ಪಕ್ಷದ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿ ಆಗುವ ಹುಚ್ಚು.ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ. ಸಿದ್ದರಾಮಯ್ಯ ಒಂದು ಮಾತು ಹೇಳಿದರೆ, ಡಿಕೆಶಿ ಒಂದು ಮಾತು ಹೇಳುತ್ತಾರೆ.

ಇಬ್ಬರಿಗೂ ಓಟು ಪಡೆಯುವ ಹುಚ್ಚು ಹತ್ತಿಕೊಂಡಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಅನ್ನುವುದು ಅವರಿಗಿಲ್ಲ. ಬಿಜೆಪಿಯವರಿಗೆ ಕೂಡ ಮತ ಪಡೆಯುವ ಹುಚ್ಚು ಬಂದಿದೆ. ಇವರಲ್ಲಿ ಒಬ್ಬರಿಗೆ ಮುಸ್ಲಿಮರ ಮತಗಳನ್ನು ಪಡೆಯುವ ಉಮೇದು. ಮತ್ತೂಬ್ಬರಿಗೆ ಮುಸ್ಲಿಮರ ಪರ ಮಾತಾಡಿದರೆ ಏನು ಹೆಚ್ಚು ಕಡಿಮೆ ಆಗುತ್ತದೋ ಎಂಬ ಭಯ ಎಂದರು.

ಇದನ್ನು ಒದಿ : https://cnewstv.in/?p=8200

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*