Cnewstv.in / 07.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 83,876 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 895 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಪಾಸಿಟಿವಿಟಿ ದರ ಶೇ. 7.25 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.96.19 ರಷ್ಟಿದೆ.
1,99,054 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,16,073 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,22,72,014 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 5,02,874 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 4,06,60,202 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 168.98 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನು ಒದಿ : https://cnewstv.in/?p=8251
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments