Breaking News

ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ: ಡಾ.ಸೆಲ್ವಮಣಿ

Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ: ಡಾ.ಸೆಲ್ವಮಣಿ

ಶಿವಮೊಗ್ಗ : ಜಿಲ್ಲೆಯಲ್ಲಿ ಕೆಎಫ್‍ಡಿ (ಮಂಗನ ಕಾಯಿಲೆ) ನಿಯಂತ್ರಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಫ್‍ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಗುರುತಿಸಲಾಗಿರುವ ಹಾಟ್‍ಸ್ಪಾಟ್‍ಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಈ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮಂಗ ಸತ್ತಿರುವುದು ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು. ಸತ್ತ ಪ್ರತಿಯೊಂದು ಮಂಗದಿಂದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಕ್ಯಾಸನೂರು ಕಾಡಿನ ಖಾಯಿಲೆಯ ನಿಯಂತ್ರಣ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ಮತ್ತಷ್ಟು ಚುರುಕುಗೊಳಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಲಸಿಕೆಯ ಗುಣಮಟ್ಟ ಹಾಗೂ ಪರಿಣಾಮಕಾರಿ ನಿಯಂತ್ರಣ ಚಟುವಟಿಕೆಗಳ ಅನುಷ್ಟಾನಕ್ಕೆ ಸಾಕ್ಷಿಯಾಗಿದೆ. ಎನ್‍ಐವಿ ಪುಣೆಯವರು ಲಸಿಕಾ ಗುಣಮಟ್ಟ ಉತ್ತಮವಾಗಿಲ್ಲದಿರುವ ಬಗ್ಗೆ ಯಾವುದೇ ವರದಿ ನೀಡಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ತಿಳಿಸಿದರು.

ಇದನ್ನು ಒದಿ : https://cnewstv.in/?p=8272

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*